ವರ್ಷ ಕಳೆದರೂ ನ್ಯಾಯ ದೊರೆತಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Update: 2021-08-11 20:16 IST
ಬೆಂಗಳೂರು, ಆ.11: ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಒಂದು ವರ್ಷ ಕಳೆದರೂ ಸೂಕ್ತ ರೀತಿಯ ನ್ಯಾಯ ದೊರೆತಿಲ್ಲ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿಗೆ ನಮ್ಮ ಮನಗೆ ಹಾಗೂ ಪೆÇಲೀಸ್ ಠಾಣೆಗೆ ಬೆಂಕಿ ಇಟ್ಟು ಒಂದು ವರ್ಷ ಅಗಿದೆ. ನಡೆಯಬಾರದ ಘಟನೆ ನಡೆದು ಹೋಗಿತ್ತು. ಅಂದಿನ ಈ ವಿಚಾರಕ್ಕೆ ನೋವಿದೆ. ಘಟನೆ ಸಂಬಂಧಪಟ್ಟಂತೆ ಪ್ರಮುಖ ಅರೋಪಿಗಳ ವಿಚಾರದಲ್ಲಿ ಕಾನೂನು ಮೂಲಕ ನ್ಯಾಯ ಸಿಕ್ಕಿದೆ. ಇನ್ನು ಸಂಪೂರ್ಣ ನ್ಯಾಯಾಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ನಮ್ಮ ಪಕ್ಷದಿಂದ ಇದುವರೆಗೂ ನ್ಯಾಯಾ ಸಿಕ್ಕಿಲ್ಲ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ. ಅಲ್ಲದೆ, ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪಕ್ಷದಲ್ಲಿ ಇಟ್ಟುಕೊಳ್ಳಬೇಡಿ ಎಂದೂ ಮನವಿ ಮಾಡಲಾಗಿದೆ ಎಂದು ತಿಳಿಸಿದರು.