ರಾಜ್ಯದಲ್ಲಿಂದು 1,826 ಮಂದಿಗೆ ಕೊರೋನ ದೃಢ, 33 ಮಂದಿ ಸಾವು

Update: 2021-08-11 14:54 GMT

ಬೆಂಗಳೂರು, ಆ.11: ರಾಜ್ಯದಲ್ಲಿ ಬುಧವಾರ 1,826 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 33 ಜನರು ಸೋಂಕಿಗೆ ಬಲಿಯಾಗಿದ್ದು, 1,618 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,22,875ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,881ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 22,851ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

33 ಸೋಂಕಿತರು ಬಲಿ:  ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 5, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ಹಾಸನ 3, ಕೊಡಗು 2, ಕೋಲಾರ 3, ಮಂಡ್ಯ 2, ಮೈಸೂರು 3, ಶಿವಮೊಗ್ಗ 1, ಉಡುಪಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,826 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 3, ಬಳ್ಳಾರಿ 13, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 26, ಬೆಂಗಳೂರು ನಗರ 377, ಚಾಮರಾಜನಗರ 15, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 65, ಚಿತ್ರದುರ್ಗ 16, ದಕ್ಷಿಣ ಕನ್ನಡ 422, ದಾವಣಗೆರೆ 13, ಧಾರವಾಡ 17, ಹಾಸನ 175, ಹಾವೇರಿ 5, ಕಲಬುರಗಿ 4, ಕೊಡಗು 71, ಕೋಲಾರ 36, ಕೊಪ್ಪಳ 4, ಮಂಡ್ಯ 35, ಮೈಸೂರು 118, ರಾಯಚೂರು 2, ರಾಮನಗರ 6, ಶಿವಮೊಗ್ಗ 47, ತುಮಕೂರು 88, ಉಡುಪಿ 130, ಉತ್ತರ ಕನ್ನಡ 79, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 377 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಬುಧವಾರದಂದು 377 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,31,474 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,923 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,07,260 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News