ಬಿಬಿಎಂಪಿ ಸಭೆ ಸಮಾರಂಭಗಳಲ್ಲಿ ಶಾಲು, ಹೂಗುಚ್ಛ ರದ್ದು

Update: 2021-08-11 15:16 GMT

ಬೆಂಗಳೂರು, ಆ.11: ರಾಜ್ಯ ಸರಕಾರ ಹೊರಡಿಸಿರುವ ಸುತ್ತೋಲೆಯನ್ವಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ ನೀಡಬಾರದು. ಅದರ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಬಿಬಿಎಂಪಿ ತಿಳಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳು ನೀಡುವ ಶಿಷ್ಟಾಚಾರವನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತಾ, ಕಾಣಿಕೆಗಳ ಬದಲಾಗಿ ಆಡಳಿತ ಭಾಷೆಯಾದ ಕನ್ನಡ ಪುಸ್ತಕಗಳನ್ನು ನೀಡಬಹುದಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News