ಆ.12: ನೂತನ ಅಂಬೇಡ್ಕರ್ ಭವನ ಲೋಕಾರ್ಪಣೆ
ಮಂಗಳೂರು, ಆ.11: ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದೊಂದಿಗೆ ಆ.12ರಂದು ಬೆಳಗ್ಗೆ 11:30ಕ್ಕೆ ಉರ್ವಸ್ಟೋರ್‌ನ ದೇರೆಬೈಲ್ ಅಂಗಡಿಗುಡ್ಡೆಯಲ್ಲಿ ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರಿಕೆ ಹಾಗೂ ಬಂದರು ಸಚಿವ ಅಂಗಾರ ಎಸ್. ಗೌರವ ಉಪಸ್ಥಿತರಿರುವರು.
ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ., ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಕೆ. ಪ್ರತಾಪಚಂದ್ರ ಶೆಟ್ಟಿ, ಬಿ.ಎಂ. ಫಾರೂಕ್, ಕೆ.ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್, ಕರ್ನಾಟಕ ಅಲೆಮಾರಿ/ ಅರೆಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಪ್ರೇಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿರುವರು.