ದ.ಕ. ಜಿಲ್ಲೆ : ಕೋವಿಡ್‌ಗೆ ಐವರು ಮೃತ್ಯು; 422 ಮಂದಿಗೆ ಕೊರೋನ ಸೋಂಕು
Update: 2021-08-11 22:20 IST
ಮಂಗಳೂರು, ಆ.11: ದ.ಕ. ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ನಿಂದಾಗಿ ಐವರು ಮೃತಪಟ್ಟಿದ್ದಾರೆ. ಹೊಸದಾಗಿ 422 ಮಂದಿಗೆ ಕೊರೋನ ಸೋಂಕು ತಗುಲಿದೆ. ಜಿಲ್ಲೆಯಲ್ಲಿ 270 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.3.85ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ 1,04,257 ಸೋಂಕಿತರ ಪೈಕಿ 99,296 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಒಟ್ಟು 1482 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 3479 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.