ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ

Update: 2021-08-12 15:15 GMT

ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಸತೀಶ್​ ರೆಡ್ಡಿ ಅವರ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ತಡರಾತ್ರಿ 1 ಗಂಟೆಯ ಸುಮಾರಿಗೆ ಬಂದ ನಾಲ್ವರು ದುಷ್ಕರ್ಮಿಗಳು ಶಾಸಕರ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದು, ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸರೆಯಾಗಿದೆ.

ಘಟನೆ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಗೃಹ ಸಚಿವರ ಭೇಟಿ

ಕಾರುಗಳಿಗೆ ಬೆಂಕಿ ಹಚ್ಚಿರುವ ವಿಷಯ ತಿಳಿಯುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಾಸಕ ಸತೀಶ್ ರೆಡ್ಡಿ ಅವರ ಮನೆಗೆ ಭೇಟಿ ನೀಡಿ, ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಅವರು, ಒಬ್ಬ ಶಾಸಕರ ಮನೆಗೆ ನುಗ್ಗಿ ಕಾರುಗಳಿಗೆ ಬೆಂಕಿ ಹಚ್ಚುವುದೆಂದರೆ ಸಾಮಾನ್ಯ ವಿಷಯವಲ್ಲ. ಕೃತ್ಯವೆಸಗಿದವರ ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರತರಾಗಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

ಹೊಸ ವ್ಯಕ್ತಿಗಳು ಕೃತ್ಯವೆಸಗಿರಬಹುದು ಎಂಬ ಅನುಮಾನವಿದೆ. ಈ ರೀತಿ ಘಟನೆ ನಡೆಯಬಾರದು. ಕಾರುಗಳಿಗೆ ಬೆಂಕಿ ಹಚ್ಚಿ ಸಾಧಿಸಿಬಿಟ್ಟಿದ್ದೇನೆ ಎಂದುಕೊಳ್ಳುವುದು ಅವರ ಹುಚ್ಚುತನ.

-ಸತೀಶ್ ರೆಡ್ಡಿ, ಬೊಮ್ಮನಹಳ್ಳಿ ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News