ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಧರಣಿ
Update: 2021-08-12 13:01 IST
ಬೆಂಗಳೂರು : ನೆರೆಪೀಡಿತ ಪ್ರದೇಶಗಳ ಪರಿಹಾರ ತಾರತಮ್ಯ ನಿವಾರಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಅವರು ವಿಧಾನ ಸೌಧ ಮತ್ತು ವಿಕಾಸಸೌಧ ಮಧ್ಯೆ ಇರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ಒಂದು ವರ್ಷದ ಅವಧಿಯಲ್ಲಿ ಪ್ರವಾಹದಿಂದ ತತ್ತರಿಸಿಹೋಗಿದ್ದು. ಎನ್ ಡಿ ಆರ್ ಎಫ್, ಎಸ್.ಡಿ.ಆರ್ ಎಫ್ ನಿಧಿಯಿಂದ ನನ್ನ ಕ್ಷೇತ್ರಕ್ಕೆ ಸಿಗಬೇಕಾದ ಪರಿಹಾರವನ್ನು ತಪ್ಪಿಸಿ ಪಕ್ಕದ ಶೃಂಗೇರಿ ಕ್ಷೇತ್ರಕ್ಕೆ ನೀಡಿದ್ದಾರೆ. ನನ್ನ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ. ಈ ತಾರತಮ್ಯದ ವಿರುದ್ಧ ಧರಣಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು.