×
Ad

ಮಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೋವಿಡ್ ಪರಿಶೀಲನಾ ಸಭೆ

Update: 2021-08-12 13:14 IST

ಮಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ಗುರುವಾರ ನಡೆಯಿತು.

ಸಂಸದ ನಳೀನ್ ಕುಮಾರ್ ಕಟೀಲ್, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್,  ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.

ಶಾಸಕರುಗಳಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ ಹಾಗು ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News