ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಆರಂಭಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
Update: 2021-08-12 14:51 IST
ಮಂಗಳೂರು : ರಾಜ್ಯದ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗಾಗಿ ಪ್ರತ್ಯೇಕ ವಿಭಾಗವನ್ನು ಆರಂಭಿಸಲು ಸೂಚನೆ ನೀಡಲಾಗುವುದು ಮತ್ತು ರಾಜ್ಯದ ಎಲ್ಲಾ ಕಡೆ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹಮ್ಮಿಕೊಂಡ ಪ್ರಗತಿ ಪರಿಶೀಲನಾ ಸಭೆಯಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಮುಂದಿನ ತಿಂಗಳು ಒಂದು ಕೋಟಿ ಕೋವಿಡ್ ನಿಯಂತ್ರಣ ಲಸಿಕೆ ತರಿಸಲಾಗುವುದು. ಇದರಿಂದ ಲಸಿಕೆ ಕೊರತೆ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.