×
Ad

ರಾಜ್ಯದಲ್ಲಿ ಆ.15ರವರೆಗೂ ವ್ಯಾಪಕ ಮಳೆ ಸಾಧ್ಯತೆ

Update: 2021-08-12 21:23 IST

ಬೆಂಗಳೂರು, ಆ12: ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆ.15 ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇದೇ ವೇಳೆ ಉತ್ತರ ಒಳನಾಡಿನ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಕೊಂಚ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News