×
Ad

​ದ.ಕ.ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ

Update: 2021-08-12 22:47 IST

ಮಂಗಳೂರು, ಆ.12: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಥಮ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್‌ರ ಅಧ್ಯಕ್ಷತೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ಬ್ಲಾಕ್ ಸಮಿತಿಗಳನ್ನು ಪುನಃ ರಚಿಸುವುದು, ಸಾಮಾಜಿಕ ಜಾಲತಾಣ ಬಲಗೊಳಿಸುವುದು, ಸಮಾಜ ಸೇವಾ ಕಾರ್ಯಗಳಲ್ಲಿ ಕಾರ್ಯೋನ್ಮುಖರಾಗುವ ಬಗ್ಗೆ ಚರ್ಚಿಸಲಾಯಿತು.ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಕಡಿತ ಮಾಡಿದ ಸರಕಾರದ ಕ್ರಮವನ್ನು ಸಭೆಯಲ್ಲಿ ಖಂಡಿಸಲಾಯಿತು.

ಜಿಲ್ಲೆಯ ಪ್ರತೀ ಬೂತ್‌ನಿಂದ 2 ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಅವರಿಗೆ ಸೂಕ್ತ ತರಬೇತಿ ನೀಡುವ ಬಗ್ಗೆ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವುದು ಸೇರಿದಂತೆ ಜಿಪಂ, ತಾಪಂ ಚುನಾವಣೆಗೆ ತಯಾರಿ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಘಟಕದ ಉಸ್ತುವಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಎಸ್., ಕಾರ್ಪೊರೇಟರ್ ನವೀನ್ ಡಿಸೋಜ, ಕೋಶಾಧಿಕಾರಿ ಹಾಜಿ ಮಹಮ್ಮದ್ ಬಪ್ಪಳಿಗೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಕಾಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News