ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
Update: 2021-08-12 23:31 IST
ಉಡುಪಿ, ಆ.12: 2021-22 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ಪದವೀಧರರು ಅರ್ಜಿ ನಮೂನೆಯನ್ನು ಆ.20ರೊಳಗೆ ನಿಗದಿತ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಕಛೇರಿಗಳ ಸಂಕೀರ್ಣ, ರಜತಾದ್ರಿ ‘‘ಬಿ‘‘ ಬ್ಲಾಕ್, ಕೊಠಡಿ 304, 2ನೇ ಮಹಡಿ ಮಣಿಪಾಲ ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಣಿಪಾಲ ಉಡುಪಿ, ದೂರವಾಣಿ ಸಂಖ್ಯೆ: 0820-2574881, 2573881ನ್ನು ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.