×
Ad

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸಿ.ಟಿ.ರವಿ ಪತ್ನಿ

Update: 2021-08-13 11:26 IST

ಚಿಕ್ಕಮಗಳೂರು, ಆ.13: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿಯವರ ಪತ್ನಿ ಕೂಡ ಇದೀಗ ರಾಜಕೀಯ ಕ್ಷೇತ್ರಕ್ಕೆ ಕಾಲಿಟಿದ್ದಾರೆ.

ಸಿ.ಟಿ.ರವಿಯವರ ಪತ್ನಿ ಪಲ್ಲವಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದರಾದರೂ ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚು ಸಕ್ರಿಯರಾಗಿರಲಿಲ್ಲ. ಆದರೆ ಸದ್ಯ ಅವರು ಬಿಜೆಪಿ ಚಿಕ್ಕಮಗಳೂರು ನಗರ ಮಂಡಲದ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದು, ಸಕ್ರಿಯ ರಾಜಕೀಯಕ್ಕೆ ಇಳಿದಿದ್ದಾರೆ.

 ಗುರುವಾರ ಪಲ್ಲವಿ ಸಿ.ಟಿ.ರವಿ ಅವರನ್ನು ಉಪಾಧ್ಯಕ್ಷೆಯನ್ನಾಗಿ ಚಿಕ್ಕಮಗಳೂರು ನಗರ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಶೋಭಾ ರಾಜೇಶ್ ನೇಮಿಸಿ ನೇಮಕಗೊಳಿಸಿ ಆದೇಶಿಸಿದ್ದಾರೆ.

ಪಲ್ಲವಿಯವರನ್ನು ಮುಂದಿನ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಸಿ.ಟಿ.ರವಿ ಯೋಜನೆ ರೂಪಿಸಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ನೀಡಿ ಸಕ್ರಿಯ ರಾಜಕಾರಣಕ್ಕೆ ಕರೆ ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News