ಎರಡು ಡೋಸ್ ಲಸಿಕೆ ಪಡೆದ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ಬೇಡ: ರಾಜ್ಯಗಳಿಗೆ ಕೇಂದ್ರ ಸೂಚನೆ

Update: 2021-08-13 06:38 GMT

ಹೊಸದಿಲ್ಲಿ: ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಬಾರದು ಎಂದು ಕೇಂದ್ರ ಸರಕಾರವು ರಾಜ್ಯಗಳಿಗೆ ಸೂಚಿಸಿದೆ.

ಈ ವಿಚಾರವಾಗಿ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ಬರೆಯಲಾಗಿದೆ. ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಭಾರತೀಯ ಪ್ರವಾಸೋದ್ಯಮ ಹಾಗೂ ಆತಿಥ್ಯ ಸಂಘಟನೆಗಳ ಒಕ್ಕೂಟದ ಜತೆ ಕೇಂದ್ರ ಪ್ರವಾಸೋದ್ಯಮ ಕಾರ್ಯದರ್ಶಿಗಳು ಆ.5ರಂದು ನಡೆದಿದ್ದ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಮಹಾರಾಷ್ಟ್ರ ಹಾಗೂ ಸಿಕ್ಕಿಂ ರಾಜ್ಯಗಳು ಮಾತ್ರ ಲಸಿಕೆಯ ಎರಡೂ ಡೋಸ್ ಪಡೆದ ಪ್ರವಾಸಿಗರ ಪ್ರವೇಶಕ್ಕೆ ಆರ್ ಟಿಪಿಸಿಆರ್ ವರದಿ ಇಲ್ಲದೆ ಅನುಮತಿ ನೀಡುತ್ತಿವೆ.

ಪಶ್ಚಿಮಬಂಗಾಳ(ಮುಂಬೈ, ಪುಣೆ ಹಾಗೂ ಚೆನ್ನೈಯಿಂದ ಬರುವವರಿಗೆ)ಕರ್ನಾಟಕ, ಗೋವಾ ಹಾಗೂ ಛತ್ತೀಸ್ ಗಡದಲ್ಲಿ ಲಸಿಕೆಯ ಎರಡೂ ಡೋಸ್ ಪಡೆದ ಪ್ರವಾಸಿಗರೂ ಆರ್ ಟಿಪಿಸಿಆರ್ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News