ಮಂಗಳೂರು : ಪತ್ರಕರ್ತರ ಸಂಘದಿಂದ ಸಿಎಂಗೆ ಮನವಿ
Update: 2021-08-13 20:10 IST
ಮಂಗಳೂರು, ಆ.13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.
ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಪತ್ರಕರ್ತರ ಗ್ರಾಮವಾಸ್ತವ್ಯ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಸಿಎಂ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಸಂಘದ ಮಾಜಿ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರವೀಂದ್ರ ಶೆಟ್ಟಿ, ಸಂಘದ ಪದಾಧಿಕಾರಿಗಳಾದ ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ಆರ್.ಸಿ. ಭಟ್, ಹರೀಶ್ ಮೋಟುಕಾನ, ಆತ್ಮಭೂಷಣ್, ಸಹಕಾರ ಸಂಘದ ನಿರ್ದೇಶಕ ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.