×
Ad

ಮಹಾರಾಷ್ಟ್ರ, ಕೇರಳದಿಂದ ಬರುವ ರೈಲು ಪ್ರಯಾಣಿಕರ ಆರ್‌ಟಿಪಿಸಿಎರ್ ಪರೀಕ್ಷೆಗೆ ನೋಡೆಲ್ ಅಧಿಕಾರಿಗಳ ನೇಮಕ

Update: 2021-08-13 20:58 IST

ಉಡುಪಿ, ಆ.13: ಉಡುಪಿ ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಕೇರಳದಿಂದ ರೈಲು ಮಾರ್ಗದ ಮೂಲಕ ಆಗಮಿಸುತ್ತಿರುವ ಪ್ರಯಾಣಿಕರ ಆರ್‌ಟಿಪಿಸಿಎರ್ ವರದಿಯನ್ನು ರೈಲು ನಿಲ್ದಾಣಗಳಲ್ಲಿ ಸಂಗ್ರಹಿಸಲು ನೋಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಇಂದ್ರಾಳಿಯಲ್ಲಿರುವ ಉಡುಪಿ ರೈಲ್ವೆ ನಿಲ್ದಾಣಕ್ಕೆ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ(ಮೊ.9845432303) ಹಾಗೂ ಮೇಲ್ವಿಚಾರಕ ರಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ (9886113207) ಇವರನ್ನು ನೇಮಿಸಲಾಗಿದೆ.

ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣಕ್ಕೆ ನೋಡಲ್ ಅಧಿಕಾರಿಯಾಗಿ ಬೈಂದೂರಿನ ತಾಲೂಕು ಕ್ರೀಡಾಧಿಕಾರಿ ಪ್ರಭಾಕರ್ (7975185766) ಇವರನ್ನು ನೇಮಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಈ ಅಧಿಕಾರಿಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ರೈಲು ಮಾರ್ಗದ ಮೂಲಕ ಆಗಮಿಸುವ ಪ್ರಯಾಣಿಕರು 72 ಗಂಟೆ ಮುಂಚಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವರದಿ ಇಲ್ಲದೇ ಇದ್ದಲ್ಲಿ ಅಂತಹ ಪ್ರಯಾಣಿಕರನ್ನು ಕಡ್ಡಾಯವಾಗಿ ರೈಲ್ವೆ ಸ್ಟೇಶನ್ ನಲ್ಲಿ ಆರ್‌ಎಟಿ ಪರೀಕ್ಷೆ ನಡೆಸಲು ಅಗತ್ಯಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News