×
Ad

ಉಡುಪಿ ಜಿಲ್ಲಾ ಸ್ವಾತಂತ್ರ್ಯೋತ್ಸವ ನೇರ ಪ್ರಸಾರ

Update: 2021-08-13 21:00 IST

ಉಡುಪಿ, ಆ.13: ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಆ.15ರಂದು ನಡೆಯುವ 75ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನೇರ ಪ್ರಸಾರವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ನೇರವಾಗಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣಕ್ಕೆ ಆಗಮಿಸಲು ನಿರ್ಬಂಧವಿರುವುದರಿಂದ ಸಾರ್ವಜನಿಕರು ಯೂಟ್ಯೂಬ್ ವಿಳಾಸ https://youtu.be/JW746h4s0uQ- ಮೂಲಕ ಹಾಗೂ ಸಿ4ಯು ಚಾನೆಲ್‌ನಲ್ಲಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News