×
Ad

ಉಡುಪಿ: ಟಿಕೇಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತಿದ್ದ ಬಾಲಕನ ರಕ್ಷಣೆ

Update: 2021-08-13 22:14 IST

ಉಡುಪಿ, ಆ.13: ಟಿಕೇಟ್ ಇಲ್ಲದೇ ಬೆಂಗಳೂರಿನಿಂದ ಉಡುಪಿಗೆ ಬಂದ 17 ವರ್ಷ ಪ್ರಾಯದ ಬಾಲಕನನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಲಾಗಿದೆ.

ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತನು ಮನೆ ಬಿಟ್ಟು ಬಂದಿರುವುದು ಖಚಿತವಾಗಿತ್ತು. ಆಗ ಆರ್‌ಪಿಎಫ್ ಸಬ್ ಇನ್‌ಸ್ಪೆಕ್ಟರ್ ಸುಧೀರ್ ಶೆಟ್ಟಿ ಅವರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು.

ಕೂಡಲೇ ರೈಲ್ವೆ ನಿಲ್ದಾಣಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತ ಯೋಗೀಶ್ ಭೇಟಿ ನೀಡಿ ಬಾಲಕನೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಿರುತ್ತಾರೆ.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕನಿಗೆ ಶಂಕರಪುರದ ಸ್ಫೂರ್ತಿ ವಿಶ್ವಾಸದ ಮನೆಯಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಆರ್‌ಪಿಎಫ್ ಸಿಬ್ಬಂದಿಗಳಾದ ಗುರುರಾಜ್, ಎಸ್.ಕೆ ಯಾದವ್, ಜಿಲ್ಲಾ ನಾಗರಿಕ ಸೇವಾ ಸಮಿತಿಯ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತಾ, ಮಕ್ಕಳ ಸಹಾಯವಾಣಿಯ ಜ್ಯೋತಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News