ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಯ್ಕೆ
Update: 2021-08-13 22:45 IST
ಬೆಂಗಳೂರು, ಆ. 13: ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿಗೆ ಇಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ (ತೋಗರ್ಸೆ) ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಕೆ.ರಾಘವೇಂದ್ರ ಮತ್ತು ಎ.ಎಂ.ಸುರೇಶ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಚುನಾವಣೆಯಲ್ಲಿ ಕೆ. ರಾಘವೇಂದ್ರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿವಣ್ಣ ಹಾಗೂ ಖಜಾಂಚಿಯಾಗಿ ಮುಂಜಾನೆ ಸತ್ಯ ಅವಿರೋಧವಾಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಪದಾಧಿಕಾರಿಗಳಿಗೆ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರಕುಮಾರ್ ಎಂ.ಎಸ್., ನಿರ್ದೇಶಕ ಸಚ್ಚಿದಾನಂದ ಕಿರುಗುಂದ ಹಾಗೂ ಕಾರ್ಯದರ್ಶಿ ಎ.ಎಸ್.ನಾಗರಾಜಸ್ವಾಮಿ ಗುಲಾಬಿ ಹೂವು ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು ಎಂದು ಸಂಘದ ಪ್ರಕಟಣೆ ತಿಳಿಸಿದೆ.