ಇಥಿಯೋಪಿಯಾ ಸಂಘರ್ಷ ಕೊನೆಗೊಳಿಸಲು ಅಮೆರಿಕ ಪ್ರಯತ್ನ; ವಿಶೇಷ ಪ್ರತಿನಿಧಿ ರವಾನೆ

Update: 2021-08-13 17:59 GMT

ವಾಷಿಂಗ್ಟನ್, ಆ.13: ಆಫ್ರಿಕಾ ಖಂಡದ ಇಥಿಯೋಪಿಯಾದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಅಂತ್ಯಗೊಳಿಸಿ ಶಾಂತಿ ಮಾತುಕತೆ ಪ್ರಕ್ರಿಯೆಗೆ ಮನವೊಲಿಸುವ ನಿಟ್ಟಿನಲ್ಲಿ ಅಮೆರಿಕದ ವಿಶೇಷ ಪ್ರತಿನಿಧಿಯೊಬ್ಬರನ್ನು ಇಥಿಯೋಪಿಯಾಕ್ಕೆ ಕಳುಹಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.

ಶಾಂತಿ ಮಾತುಕತೆಗೆ ಮುಂದಾಗುವಂತೆ ಇಥಿಯೋಪಿಯಾ ಸರಕಾರ ಮತ್ತು ಟಿಗ್ರೆ ಪೀಪಲ್ಸ್ ಲಿಬರೇಷನ್ ಫ್ರಂಟ್(ಟಿಪಿಎಲ್ಎಫ್) ಪಡೆಗಳಿಗೆ ಕರೆ ನೀಡಿದ ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವಾನ್, 9 ತಿಂಗಳಿನಿಂದ ನಡೆಯುತ್ತಿರುವ ಅಂತರ್ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ಪಡೆಗಳ ಮನವೊಲಿಸುವ ಉದ್ದೇಶದಿಂದ ವಿಶೇಷ ಪ್ರತಿನಿಧಿ ಜೆಫ್ರೀ ಫೆಲ್ಟ್ಮನ್ ಇಥಿಯೋಪಿಯಾಕ್ಕೆ ತೆರಳಲಿದ್ದಾರೆ ಎಂದು ಘೋಷಿಸಿದರು. ‌

ಇಥಿಯೋಪಿಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಸಾವಿರಾರು ಮಂದಿ ಮೃತರಾಗಿದ್ದು ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಿದೆ. ಜನಾಂಗ ಹತ್ಯೆ, ಅತ್ಯಾಚಾರಗಳನ್ನು ಯುದ್ಧದ ಅಸ್ತ್ರಗಳಾಗಿ ಬಳಸಲಾಗುತ್ತಿದೆ ಎಂದು ವಿಶ್ವಸಂಸ್ಥೆ ಕಳವಳ ಸೂಚಿಸಿತ್ತು. ಟಿಗ್ರೆ ಪ್ರಾಂತ್ಯದಲ್ಲಿ 1 ಲಕ್ಷಕ್ಕೂ ಅಧಿಕ ಮಕ್ಕಳನ್ನು ಪ್ರಾಣಕ್ಕೇ ಸಂಚಕಾರ ತರಬಲ್ಲ ಅಪೌಷ್ಟಿಕತೆಯ ಸಮಸ್ಯೆಯಲ್ಲಿದ್ದು, 4 ಲಕ್ಷಕ್ಕೂ ಹೆಚ್ಚು ಮಂದಿ ಆಹಾರದ ಕೊರತೆ ಎದುರಿಸುತ್ತಿದ್ದಾರೆ ಎಂದು ವಿಶ್ವಸಂ ಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News