×
Ad

ಮನೆಗೆ ನಕಲಿ ಕೀ ಬಳಸಿ ಕಳವು: ಆರೋಪಿಯ ಬಂಧನ, 10ಲಕ್ಷ ಮೌಲ್ಯದ ಚಿನ್ನಾಭರಣ ವಶ

Update: 2021-08-14 00:32 IST

ಬೆಂಗಳೂರು, ಆ.13: ಪರಿಚಯ ಮಾಡಿಕೊಂಡ ಮನೆಯ ನಕಲಿ ಕೀ ಮಾಡಿಸಿ ಬೀಗ ಹಾಕಿಕೊಂಡು ಹೋಗಿದ್ದಾಗ ಮನೆಗೆ ನುಗ್ಗಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಖದೀಮನನ್ನು ಕೆಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯಿಂದ 10 ಲಕ್ಷ ಮೌಲ್ಯದ 235 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ಬಂದು ಹೋಗುವ ನೆಪ ಮಾಡಿ ಮನೆಯ ಕೀಯನ್ನು ಗೊತ್ತಾಗದಂತೆ ನಕಲು ಮಾಡಿಸಿಕೊಂಡಿದ್ದ ಮನೆಯವರೆಲ್ಲಾ ಬೀಗ ಹಾಕಿಕೊಂಡು ಹೊರಹೋಗಿದ್ದಾಗ ಸಂಚು ರೂಪಿಸಿ ಮನೆಗೆ ನುಗ್ಗಿ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ.

ಈ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡ ಕೆಪಿ ಅಗ್ರಹಾರ ಪೊಲೀಸರು ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News