×
Ad

ತೀರ್ಥಹಳ್ಳಿ: ಗೊಂದಲಕ್ಕೆ ಕಾರಣವಾದ ಬಸ್ ನಿಲ್ದಾಣದ ಬಳಿ ಕಂಡುಬಂದ ದನದ ಕಳೇಬರ

Update: 2021-08-14 11:14 IST
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಆ.14: ತೀರ್ಥಹಳ್ಳಿ ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ದನದ ಕಳೇಬರ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದರಿಂದ ಸ್ಥಳೀಯವಾಗಿ ಆತಂಕಕ್ಕೆ ಕಾರಣವಾಗಿತ್ತು.

ತೀರ್ಥಹಳ್ಳಿ ಬಸ್ ನಿಲ್ದಾಣ ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದರೂ ದನದ ಕಳೇಬರ ಯಾರ ಗಮನಕ್ಕೆ ಬಂದಿಲ್ಲ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಗೆ ಇದು ಜನರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು.

ಸ್ಥಳೀಯ ಪೊಲೀಸರ ಮಾಹಿತಿ ಪ್ರಕಾರ ದನವೊಂದು ಬಸ್ಸಿನಡಿಗೆ ಸಿಲುಕಿ ಸಾವನ್ನಪ್ಪಿದೆ. ದನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾದ ಬಸ್ಸೊಂದರ ಮೇಲೆ ಶಂಕೆ‌ಯಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News