×
Ad

ಎಸೆಸೆಲ್ಸಿ: ತುಂಬೆ ಬಿ.ಎ. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

Update: 2021-08-14 11:20 IST

ಬಂಟ್ವಾಳ, ಆ.14: ಕಳೆದ (2020-2021ನೇ) ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ತುಂಬೆ ಬಿ.ಎ. ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಪ್ರೌಢ ಶಾಲೆ ಉತ್ತಮ ಫಲಿತಾಂಶ ದಾಖಲಿಸಿದೆ.

ಆಂಗ್ಲ ಮಾಧ್ಯಮ ಶಾಲೆಯಿಂದ 55 ವಿದ್ಯಾರ್ಥಿಗಳು ಹಾಗೂ ಕನ್ನಡ ಮಾಧ್ಯಮ ಶಾಲೆಯಿಂದ 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ‌. 

ಆಂಗ್ಲ ಮಾಧ್ಯಮ ಪ್ರೌಢಶಾಲೆಯ 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ. 611 ಅಂಕ ಗಳಿಸಿರುವ ಕೀರ್ತಿ ಕೆ. ಶಾಲೆಗೆ ಪ್ರಥಮ ಸಹಾಗೂ ಶ್ರದ್ಧಾ ಆರ್. ಉಚ್ಚಿಲ್ 603 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿದ್ದು, 590 ಅಂಕ ಗಳಿಸಿ ಲಿಖಿತಾ ಪ್ರಥಮ ಸ್ಥಾನ ಹಾಗೂ ಬಿಂದೂ 585 ಅಂಕ ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News