×
Ad

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ತೆರವು: ನೊಂದ ಯುವಕನಿಂದ ಆತ್ಮಹತ್ಯೆ ಯತ್ನ

Update: 2021-08-14 11:36 IST

ಶಿವಮೊಗ್ಗ, ಆ.14: ಶಿಕಾರಿಪುರದ ಎಸ್.ಎಸ್. ರಸ್ತೆ ಪಕ್ಕದಲ್ಲಿ ಸಂಘಟನೆಯೊಂದು ಪ್ರತಿಷ್ಠಾಪಿಸಲುದ್ದೇಶಿಸಿದ್ದ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ತಾಲೂಕು ಆಡಳಿತವು ಕಳೆದ ರಾತ್ರಿ ತೆರವುಗೊಳಿಸಿದೆ.

ಎಸ್.ಎಸ್. ರಸ್ತೆ ಪಕ್ಕದಲ್ಲಿ ಸಂಗೊಳ್ಳಿರಾಯಣ್ಣ ಪುತ್ಥಳಿ ಪ್ರತಿಷ್ಠಾಪಿಸಲು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಸಂಘಟನೆಯೊಂದು ಉದ್ದೇಶಿಸಿದ್ದು, ಆ.19ರಂದು ಕುರುಬ ಸಮಾಜದ ಶ್ರೀನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ಸ್ವಾಮೀಜಿಗಳ ಸಮ್ಮುಖದಲ್ಲಿ ಪುತ್ಥಳಿ ಅನಾವರಣಕ್ಕೆ ತೀರ್ಮಾನಿಸಲಾಗಿತ್ತು. ಈ‌ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಹಂಚಲಾಗಿತ್ತು. ಆದರೆ ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ತಹಶೀಲ್ದಾರ್ ಕವಿರಾಜ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಪೊಲೀಸ್ ಭದ್ರಾತೆ ನೇತೃತ್ವದಲ್ಲಿ ಪುತ್ಥಳಿಯನ್ನು ತೆರವುಗೊಳಿಸಲಾಗಿದೆ.

ತಾಲೂಕು ಆಡಳಿತದ ಕ್ರಮದಿಂದ ಆಕ್ರೋಶಗೊಂಡ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಎಸ್.ಎಸ್. ರಸ್ತೆಯಲ್ಲಿ ಇಂದು ಬೆಳಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಅಶೋಕ್ ಎಂಬಾತ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಸ್ಥಳದಲ್ಲಿದ್ದವರು ಆತನನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News