ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ: ಸಿಎಂ ಬೊಮ್ಮಾಯಿ
Update: 2021-08-14 12:24 IST
ಬೆಂಗಳೂರು, ಆ.14: ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಇದು ಉಲ್ಬಣಗೊಂಡ ಬಳಿಕ ಕ್ರಮ ತೆಗೆದುಕೊಳ್ಳುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ. ನಗರದಲ್ಲಿರುವ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಇಂದು ಸಂಜೆ ಸಭೆ ನಡೆಯಲಿದೆ. ಸಭೆಯಲ್ಲಿ ವೈಜ್ಞಾನಿಕವಾಗಿ ಚಿಂತನೆ ಮಾಡುತ್ತೇವೆ ಎಂದರು.
ಜನರಿಗೆ, ಜನರ ಬದುಕಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶ ಅಲ್ಲ. ಆದರೆ, ಕೋವಿಡ್ ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಹೇಳಿದರು.