ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ: ಜುಲೈ ತಿಂಗಳಿನಲ್ಲಿ 3.60ಲಕ್ಷ ರೂ.ದಂಡ ವಸೂಲಿ

Update: 2021-08-14 12:22 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.14: ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಜುಲೈ ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 2,362 ಪ್ರಯಾಣಿಕರಿಂದ 3.60ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಕೆಎಸ್ಸಾರ್ಟಿಸಿಯ ತನಿಖಾ ತಂಡಗಳು ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41,932 ವಾಹನಗಳನ್ನು ತನಿಖೆಗೊಳಪಡಿಸಿ 2,288 ಪ್ರಕರಣಗಳನ್ನು ಪತ್ತೆಹಚ್ಚಿ, 2,362 ಟಿಕೇಟ್ ರಹಿತ ಪ್ರಯಾಣಿಕರಿಂದ 3,60,645 ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. 
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 47,371 ರೂ.ವನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್ ಇಲ್ಲವೆ ಪಾಸ್ ಪಡೆದು ಪ್ರಯಾಣ ಮಾಡುವಂತೆ ಕೆಎಸ್ಸಾರ್ಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News