ಉಡುಪಿ: ಕೋವಿಡ್ ಗೆ ಮಹಿಳೆ ಬಲಿ; 169 ಮಂದಿಗೆ ಕೊರೋನ ಸೋಂಕು
ಉಡುಪಿ, ಆ.14: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿನಿಂದ ಓರ್ವ ಮಹಿಳೆ ಮೃತಪಟ್ಟರೆ, ಸೋಂಕಿಗೆ ಪಾಸಿಟಿವ್ ಬಂದವರು 169 ಮಂದಿ. ದಿನದಲ್ಲಿ 146 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1296ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಉಡುಪಿ ತಾಲೂಕಿನ 61 ವರ್ಷ ಪ್ರಾಯದ ಮಹಿಳೆಯೊಬ್ಬರು ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿನ ಗುಣಲಕ್ಷಣ ದೊಂದಿಗೆ ತೀವ್ರ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾ ಜ್ವರದಿಂದ ಬಳಲುತಿದ್ದ ಇವರು ಆ.9ರಂದು ಚಿಕಿತ್ಸೆಗೆ ದಾಖಲಾಗಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 433ಕ್ಕೇರಿದೆ.
ಇಂದು ಕೊರೋನ ಸೋಂಕು ದೃಢಪಟ್ಟ 169 ಮಂದಿಯಲ್ಲಿ 93 ಮಂದಿ ಪುರುಷರು ಹಾಗೂ 76 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 98 ಮಂದಿ ಉಡುಪಿ ತಾಲೂಕು, 25 ಮಂದಿ ಕುಂದಾಪುರ, 43 ಮಂದಿ ಕಾರ್ಕಳ ತಾಲೂಕಿನವರಾದರೆ ಹಾಗೂ ಮೂವರು ಹೊರಜಿಲ್ಲೆಯವರು. ಇಂದು ಪಾಸಿಟಿವ್ ಬಂದವರಲ್ಲಿ 35 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 134 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಶುಕ್ರವಾರ 146 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 69,912ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 5848 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 71,641ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,48,408 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಜಿಲ್ಲೆಯಲ್ಲಿ ಇಂದು ಹೊಸದಾಗಿ ಯಾರಲ್ಲೂ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿಲ್ಲ. ಸದ್ಯ ಹೊರಜಿಲ್ಲೆಗಳ 7 ಮಂದಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
670 ಮಂದಿಗೆ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಇಂದು 670 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವುಗಳಲ್ಲಿ 547 ಮಂದಿಗೆ ಮೊದಲ ಡೋಸ್ ಹಾಗೂ 123 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 429 ಮಂದಿ ಮೊದಲ ಹಾಗೂ 67 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 118 ಮಂದಿಗೆ ಮೊದಲ ಹಾಗೂ 56 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,61,597 ಮಂದಿಗೆ ಮೊದಲ ಡೋಸ್ ಹಾಗೂ 2,05,641 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.