ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Update: 2021-08-14 20:09 IST
ಉಡುಪಿ, ಆ.14: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸೆಸೆಲ್ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಆಭ್ಯರ್ಥಿ ಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉಡುಪಿಯ ಸರಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾಕ್ಕೆ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಪ್ರಕಾರ ಆ.31 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2570244ನ್ನು ಸಂಪರ್ಕಿಸಬಹುದು ಎಂದು ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.