×
Ad

75ನೆ ಸ್ವಾತಂತ್ರೋತ್ಸವದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ

Update: 2021-08-14 21:05 IST

 ಉಡುಪಿ, ಆ.14: ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯದಾದ್ಯಂತ ಹಮ್ಮಿ ಕೊಂಡಿರುವ ರಕ್ತದಾನ ಶಿಬಿರ ಅಭಿಯಾನದ ಭಾಗವಾಗಿ ಉಡುಪಿ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿ ಒಟ್ಟು 200ಕ್ಕಿಂತಲೂ ಅಧಿಕ ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಅಭಿಯಾನದ ಅಂಗವಾಗಿ ಉಡುಪಿಯ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಹಯೋಗ ದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಮಣಿಪಾಲದ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯಲ್ಲಿ ಇಂದು ನಡೆಯಿತು.

ಫೋರಂನ ಗೌರವಾಧ್ಯಕ್ಷ ಶೇಕ್ ಖಾಲಿದ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆಎಂಸಿ ಆಸ್ಪತ್ರೆ ರಕ್ತನಿಧಿ ವಿಭಾಗದ ಮುಖ್ಯಸ್ಥೆ ಡಾ.ಶಮಿ ಶಾಸ್ತ್ರಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು. ಪಿಎಫ್‌ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಯಾಜ್ ಅಹ್ಮದ್, ಆಕ್ಸೆಸ್ ಇಂಡಿಯಾ ತರಬೇತುದಾರ ಹಾಗೂ ಹೆಲ್ತ್ ಕೋಚ್ ರಿಜ್ವಾನ್ ಅಬ್ದುಲ್ ರಹ್ಮಾನ್ ಮಾತನಾಡಿದರು.

ಡಾ.ಮೀನಾ ಕುಮಾರಿ, ಡಾ.ರಾಜೇಂದ್ರನ್, ಫೋರಂನ ಅಧ್ಯಕ್ಷ ಸಲ್ಮಾನ್, ಕಾರ್ಯದರ್ಶಿ ಮುಹಮ್ಮದ್ ಮುಸ್ತಫಾ ಉಪಸ್ಥಿತರಿದ್ದರು. ಮಹಮ್ಮದ್ ಶಫೀಕ್ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ಮುಸ್ತಫಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News