ಗೂಡ್ಸ್ ರಿಕ್ಷಾ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2021-08-14 22:05 IST
ಕೊಲ್ಲೂರು, ಆ.14: ಗೂಡ್ಸ್ ರಿಕ್ಷಾವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಆ.13ರಂದು ಸಂಜೆ ವೇಳೆ ಚಿತ್ತೂರು ಗ್ರಾಮದ ಅಡಾರಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಬೈಕ್ ಸವಾರ ಆನಂದ ಎಂದು ಗುರುತಿಸಲಾಗಿದೆ. ಕೆರಾಡಿ ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರಿಕ್ಷಾ, ಕೆರಾಡಿ ಕಡೆಯಿಂದ ಚಿತ್ತೂರು ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಆನಂದ್, ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.