75ನೇ ಸ್ವಾತಂತ್ರ್ಯ ದಿನಾಚರಣೆ: ರಾಜ್ಯ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ

Update: 2021-08-15 04:39 GMT

ಬೆಂಗಳೂರು : 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ವರೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದರು.

ಬಳಿಕ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗರೆಡ್ಡಿ, ಸಲೀಂ ಅಹ್ಮದ್ ಹಾಗು ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News