ಕಲಘಟಗಿಯಲ್ಲಿ ವಿನೂತನ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2021-08-15 10:53 GMT

ಹುಬ್ಬಳ್ಳಿ, ಆ. 15: ಎಪ್ಪತ್ತೈದನೆ ಸ್ವಾತಂತ್ರೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ವಿನೂತನ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪ ಕೇಳಿಬಂದಿದೆ.

ಸುಮಾರು 10 ಸಾವಿರ ಮಂದಿ, ಎರಡು ಸಾವಿರ ಮೀಟರ್ ಉದ್ದದ (2 ಕಿ.ಮೀ.) 9 ಅಡಿ ಅಗಲದ ರಾಷ್ಟ್ರಧ್ವಜವನ್ನು ಹಿಡಿದು ಕಲಘಟಗಿಯ ತಡಸ ಕ್ರಾಸ್‍ನಿಂದ ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಧ್ವಜವನ್ನು ಮೆರವಣಿಗೆ ಮಾಡಲಾಗಿದ್ದು, ಈ ಮೆರವಣಿಗೆಯಲ್ಲಿ ಪಾಲ್ಗೊಂಡಿ ದ್ದವರು ಯಾರೂ ಮಾಸ್ಕ್ ಧರಿಸದೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ಕೊರೊನ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

ಈಗಾಗಲೇ ರಾಜ್ಯದಲ್ಲಿ ಕೊರೊನ ಮೂರನೇ ಅಲೆಯ ಭೀತಿ ಆರಂಭವಾಗಿದ್ದು, ಸರಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. ಅಲ್ಲದೆ, ಸಭೆ, ಸಮಾರಂಭ, ಅಂತ್ಯ ಸಂಸ್ಕಾರಗಳಲ್ಲಿ ಸೀಮಿತ ಜನ ಮಾತ್ರ ಭಾಗವಹಿಸಬೇಕೆಂದು ಸೂಚಿಸಿದೆ. ಆದರೆ, ಸ್ವಾತಂತ್ರ್ಯ ದಿನಾಚರಣೆ ನೆಪದಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಸೇರಿಸಿದ್ದು ಸರಿಯಲ್ಲ ಎಂಬ ಆಕ್ಷೇಪ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News