ಝಮೀರ್ ಅಹ್ಮದ್ ನಿವಾಸಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

Update: 2021-08-15 15:08 GMT

photo: twitter @BZZameerAhmedK
 

ಬೆಂಗಳೂರು, ಆ. 15: ವಿಧಾನಸಭೆ ವಿರೋಧ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಇತ್ತೀಚೆಗೆ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಈಡಿ) ದಾಳಿ ನಡೆದಿತ್ತು. ಹೀಗಾಗಿ ಝಮೀರ್ ನಿವಾಸಕ್ಕೆ ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಝಮೀರ್ ನಿವಾಸದಲ್ಲಿ ವಿಶೇಷ ಔತಣಕೂಟವನ್ನು ಏರ್ಪಡಿಸಲಾಗಿತ್ತು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, `ಶಾಸಕ ಝಮೀರ್ ಅಹ್ಮದ್ ಖಾನ್ ಅವರ ಗೃಹ ಪ್ರವೇಶಕ್ಕೆ ಬರಲು ಆಗಿರಲಿಲ್ಲ. ನಿವಾಸಕ್ಕೆ ಬನ್ನಿ ಎಂದು ಝಮೀರ್ ಪದೇ ಪದೇ ಕರೆಯುತ್ತಿದ್ದರು. ನಿನ್ನೆ ಔತಣಕೂಟಕ್ಕೆ ಬನ್ನಿ ಎಂದು ಆಹ್ವಾನಿಸಿದ್ದರು. ಇದೊಂದು ಖಾಸಗಿ ಭೇಟಿ. ಯಾವುದೇ ರಾಜಕೀಯದ ವಿಚಾರ ಮಾತನಾಡಿಲ್ಲ. ಮನೆಗೆ ಬಂದು ಊಟ ಮಾಡಿದ್ದೇನೆ. ಜಾರಿ ನಿರ್ದೇಶನಾಲಯ ದಾಳಿ ಮಾಡಿದ ವಿಚಾರವನ್ನು ಝಮೀರ್ ಅಹ್ಮದ್ ಖಾನ್ ಮತ್ತವರ ವಕೀಲರು ನೋಡಿಕೊಳ್ಳುತ್ತಾರೆ' ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News