×
Ad

ಸಾಮಾಜಿಕ ಪಿಡುಗುಗಳ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ: ಪ್ರದೀಪ್ ಎಸ್. ಕುರ್ಡೇಕರ್

Update: 2021-08-15 22:35 IST

ಕಾಪು : ಸಾಮಾಜಿಕ ಪಿಡುಗುಗಳ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ. ಅದರೊಂದಿಗೆ ರಾಷ್ಟ್ರೀಯತೆಯನ್ನು ಉಳಿಸಲು ನಾವೆಲ್ಲರೂ ಸಂಘಟಿತರಾಗಬೇಕಾಗಿದೆ ಎಂದು ಕಾಪು ತಹಶೀಲ್ದಾರ್ ಪ್ರದೀಪ್ ಎಸ್. ಕುರ್ಡೇಕರ್ ಹೇಳಿದರು.

ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 

ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಕಾಪು ತಾಲೂಕಿನಲ್ಲಿ ಕೊರೊನಾ ವಿರುದ್ಧ ಮುಂಜಾಗ್ರತಾ ಕ್ರಮಗಳ ಪಾಲನೆ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದರ ಜೊತೆಗೆ ಅಭಿವೃದ್ಧಿಯತ್ತಲೂ ವಿಶೇಷ ಗಮನ ಹರಿಸಬೇಕಿದ್ದು, ಇದಕ್ಕೆ ಸರ್ವ ಜನರ ಸಹಕಾರದ ಅಗತ್ಯತೆಯಿದೆ ಎಂದರು. 

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾಲ್ಲೂಕು ಪಂಚಾಯಿತಿ  ಕಾರ್ಯ ನಿರ್ವಾಹಣಾಧಿಕಾರಿ ವಿವೇಕಾನಂದ ಗಾಂವ್ಕರ್, ವೃತ್ತ ನಿರೀಕ್ಷಕ ಪ್ರಕಾಶ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ಅತಿಥಿಗಳಾಗಿದ್ದರು.

ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಉಪತಹಶೀಲ್ದಾರ್ ಕೆ. ರವಿಶಂಕರ್, ಅಶೋಕ್ ಕೋಟೆಕಾರ್, ಚಂದ್ರಹಾಸ ಭಂಡಾರಿ, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮಾನ : ಕಾಪು ತಾಲೂಕು ರಾಷ್ಟ್ರೀಯ ಹಾಗು ನಾಡ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸಾಧಕರಾದ ಗಿನ್ನೆಸ್ ದಾಖಲೆ ವೀರೆ ಯೋಗಪಟು ತನುಶ್ರೀ ಪಿತ್ರೋಡಿ, ಈಶ್ವರ್ ಮಲ್ಪೆ, ಗೃಹರಕ್ಷಕದಳದ ಘಟಕಾಧಿಕಾರಿ ಲಕ್ಷ್ಮೀನಾರಾಯಣ ರಾವ್, ಪಡುಬಿದ್ರಿ ಎಎಸ್‍ಐ ದಿವಾಕರ್, ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಮಹಾಬಲ ಗಾಣಿಗ, ಕಂದಾಯ ಇಲಾಖೆಯ ಸಿಬಂದಿ ಫಿರೋಜ್ ಖಾನ್, ಗ್ರಾಮ ಸಹಾಯಕ ಮಂಜು ದೇವಾಡಿಗ, ಆರೋಗ್ಯ ಇಲಾಖೆಯ ಅಭಿಲಾಷ್, ಕೃಷ್ಣ, ಪುರಸಭೆಯ ರಾಘು, ಕಿರಣ್, ಗ್ರಾ.ಪಂ. ಅಧಿಕಾರಿಗಳಾದ ಪಂಚಾಕ್ಷರಿ ಕೇರಿಮಠ, ವಸಂತಿ ಬಾಯಿ ಹಾಗೂ ಸ್ಕೌಟ್ ಗೈಡ್ಸ್ ನ ಶಾಲೆಟ್ ಕರ್ಕಡ ಅವರನ್ನು ಸಮ್ಮಾನಿಸಲಾಯಿತು. 

ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು. ಪೊಲಿಪು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾಗರಾಜ್ ಜಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News