ಆ.17ರಂದು ಅಂಬೇಡ್ಕರ್ ವಾದ, ಸಹಬಾಳ್ವೆ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ- ಜಾಥ
Update: 2021-08-16 19:37 IST
ಉಡುಪಿ, ಆ.16: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಅಪ್ರಾಪ್ತ ದಲಿತ ಹೆಣ್ಣು ಮಗಳ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ಸಹಬಾಳ್ವೆ ಸಂಘಟನೆಯ ನೇತೃತ್ವದಲ್ಲಿ ಆ.17ರಂದು ಸಂಜೆ 5ಗಂಟೆಗೆ ಉಡುಪಿಯ ಅಜ್ಜರಕಾಡು ಹುತಾತ್ಮ ಚೌಕದಲ್ಲಿ ಪ್ರತಿಭಟನೆ ಮತ್ತು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಸುಂದರ್ ಮಾಸ್ತರ್ ಹಾಗೂ ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.