×
Ad

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2021-08-16 20:19 IST

ಕುಂದಾಪುರ, ಆ.16: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಧ್ವಜಾ ರೋಹಣವನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಹ್ಮಾನ್ ನೆರವೇರಿಸಿದರು.

ಪುರಸಭಾ ಸದಸ್ಯೆ ಲಕ್ಷ್ಮೀ ಬಾಯಿ, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮುಖ್ಯ ಸಲಹೆಗಾರ ಅಬುಶೇಕ್ ಸಾಹೇಬ್ ಮಾತನಾಡಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಪ್ರೊ.ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾಡಿದರು. ಪುರಸಭಾ ಸದಸ್ಯ ನಾಗರಾಜ್ ಕಾಂಚನ್, ಹಾಜಿ ಕೆ. ಮೊಹಿದ್ದೀನ್ ಬ್ಯಾರಿ, ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳಾದ ಶಂಕರ್ ಪೂಜಾರಿ, ಭಾಸ್ಕರ್ ಪುತ್ರನ್, ರಫೀಕ್, ಸಂಜೀವ ಪೂಜಾರಿ, ರಾಮಕೃಷ್ಣ ಪೂಜಾರಿ, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಪ್ರಕಾಶ್, ಮುಸ್ತರಿನ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಅಶ್ವಿನಿ ಶೆಟ್ಟಿ, ಹಾಜಿ ಕೆ.ಮೊಹಿದ್ದೀನ್, ಶಾಲಾ ಮುಖ್ಯೋಪಾದ್ಯಾಯಿನಿ ಜಯಂತಿ, ಬೀಬಿ ಫಾತಿಮಾ, ಅಂಗನವಾಡಿ ಮುಖ್ಯಸ್ಥೆ ಸುಮಿತ್ರಾ ಹಾಗೂ ಡಾ.ಆಸಿಫ್ ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಅಶ್ವಿನಿ ಶೆಟ್ಟಿ ವಂದಿಸಿದರು. ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಮಾಲತಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News