×
Ad

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ: ಡಿಸಿ ಜಿ.ಜಗದೀಶ್

Update: 2021-08-16 21:01 IST

ಉಡುಪಿ, ಆ.16: ಜಿಲ್ಲೆಯಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಹಾಗೂ ಸೋಂಕಿನ ಸರಪಳಿಯನ್ನು ಮುರಿಯಲು ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂವನ್ನು ಮತ್ತೆ ಮುಂದುವರಿಸಲಾಗಿದೆ. ಈ ಕರ್ಫ್ಯೂ ಇಂದಿನಿಂದ (ಆ.16) ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ರಿಂದ ಮರುದಿನ ಬೆಳಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5ರ ನಡುವೆ ಅಗತ್ಯ ಚಟುವಟಿಕೆಗಳನ್ನು ಹೊರತು ಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಉಳಿದಂತೆ ಕೋವಿಡ್-19ರ ಹಿಂದಿನ ಎಲ್ಲಾ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ.

ರೋಗಿಗಳು ಮತ್ತು ಅವರೊಂದಿಗೆ ತೆರಳುವ ಪರಿಚಾರಕರು, ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿ ಇದೆ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವವರು ರಾತ್ರಿ ಸಮಯದಲ್ಲಿ ತೆರಳಲು ಅನುಮತಿ ನೀಡಲಾಗಿದೆ. ವೈದ್ಯಕೀಯ ಸೇವೆ, ತುರ್ತು ಮತ್ತು ಔಷಧಾಲಯಗಳು ಯಥಾ ರೀತಿಯಲ್ಲಿ ಕಾರ್ಯನಿರ್ವಹಿಸಬಹುದು. ಆದರೆ ಇತರ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ.

ಬಸ್ ಸೇವೆಗಳು, ರೈಲುಗಳು ಹಾಗೂ ವಿಮಾನ ಪ್ರಯಾಣಕ್ಕೆ ಅವಕಾಶವಿದೆ. ಅಲ್ಲಿಗೆ ಸಾರಿಗೆ ವಾಹನ, ಖಾಸಗಿ ವಾಹನ. ಟ್ಯಾಕ್ಸಿಗಳಲ್ಲಿ ತೆರಳಲು ಅನುಮತಿ ಇದೆ. ಆದರೆ ಸೂಕ್ತ ಪ್ರಯಾಣದ ದಾಖಲೆಗಳು, ಟಿಕೆಟ್‌ಗಳನ್ನು ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಮಗಳನ್ನು ದಾಖಲಿಸಿ ನಿಯಮಾನುಸಾರ ಕಠಿಣ ಕ್ರಮಕೈಗೊ ಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News