×
Ad

ಕಾರಂತ ಥೀಮ್ ಪಾರ್ಕ್‌ನಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ: ಸಚಿವ ಸುನೀಲ್ ಕುಮಾರ್

Update: 2021-08-16 21:08 IST

ಉಡುಪಿ, ಆ.16: ರಾಜ್ಯದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವರ್ಷವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದ್ದು, ಇವುಗಳಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ವೊಂದನ್ನು ಕೋಟದ ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಆಯೋಜಿಸಲಾಗುವುದು ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಸೋಮವಾರ ಕೋಟದಲ್ಲಿರುವ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಡಾ.ಕೋಟ ಶಿವರಾಮ ಕಾರಂತರ ಪುತ್ಥಳಿಗೆ ಮಾಲಾ ರ್ಪಣೆ ಮಾಡಿ ಅವರು ಮಾತನಾಡುತಿದ್ದರು.

ಇಲಾಖೆಯು ಒಂದು ವರ್ಷದ ಕಾರ್ಯಕ್ರಮಗಳ ಪಟ್ಟಿಯನ್ನು ರೂಪಿಸುತಿದ್ದು, ಇವುಗಳಲ್ಲಿ ಪ್ರಮುಖ ರಾಜ್ಯಮಟ್ಟದ ಕಾರ್ಯಕ್ರಮವೊಂದನ್ನು ಇಲ್ಲಿ ಆಯೋಜಿಸಲಾಗುವುದು ಎಂದವರು ಭರವಸೆ ನೀಡಿದರು. ಡಾ.ಶಿವರಾಮ ಕಾರಂತರದ್ದು ಚಲನಶೀಲ ವ್ಯಕ್ತಿತ್ವ. ಸಾಹಿತ್ಯದ ಎಲ್ಲಾ ಪ್ರಕಾರ ಗಳಲ್ಲೂ ಅವರು ನಾಡಿಗೆ ನೀಡಿರುವ ಕೊಡುಗೆ ಅಪಾರ. ಅವರ ವ್ಯಕ್ತಿತ್ವ, ಚಿಂತನೆ, ಜೀವನ ಚರಿತ್ರೆ ಮುಂದಿನ ಪೀಳಿಗೆಗೆ ಸಾರುವ ಉದ್ದೇಶದಿಂದ ನಿರ್ಮಾಣಗೊಂಡಿರುವ, ಥೀಂ ಪಾರ್ಕ್ ನ ಅಭಿವೃದ್ದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷೆ ಅಶ್ವಿನಿ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕಾರಂತ ಥೀಂ ಪಾರ್ಕ್‌ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News