×
Ad

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಸಿಎಫ್‌ಐ ಪ್ರತಿಭಟನೆ

Update: 2021-08-16 21:17 IST

ಕುಂದಾಪುರ ಆ.16: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಗೆ ಮಾರ್ಚ್ ನಡೆಸಿದಕ್ಕಾಗಿ ಬಂಧಿಸಲ್ಪಟ್ಟ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರ ಸಹಿತ ವಿದ್ಯಾರ್ಥಿಗಳ ತಕ್ಷಣ ಬಿಡುಗಡೆಗೆ ಆಗ್ರಹಿಸಿ ಸಿಎಫ್‌ಐ ಕುಂದಾಪುರ ಜಿಲ್ಲಾ ಸಮಿತಿಯಿಂದ ಸೋಮವಾರ ಕುಂದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಮುಖಂಡ ನವಾಜ್ ಶೇಕ್ ಮಾತನಾಡಿ ಹೊಸ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಚರ್ಚೆ ನಡೆಸದೆ, ತಾರಾತುರಿ ಯಲ್ಲಿ ಹಿಂಬಾಗಿಲಿನ ಮೂಲಕ ಜಾರಿಗೊಳಿಸಲು ಸರಕಾರವು ಹೊರಟಿದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಂಪೂರ್ಣವಾಗಿ ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಗೊಳಿಸುವ ಮತ್ತು ಖಾಸಗೀಕರಣಗೊಳಿಸುವ ಹುನ್ನಾರವಾಗಿದೆ ಆದ್ದರಿಂದ ಈ ಅಸಮರ್ಪಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯರಾದ ಝೆಶನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News