ಶಾಸಕ ಝಮೀರ್ ಅಹ್ಮದ್ ನಿವಾಸಕ್ಕೆ ಡಾ.ಜಿ. ಪರಮೇಶ್ವರ್ ಭೇಟಿ
Update: 2021-08-16 22:56 IST
photo: twitter @BZZameerAhmedK
ಬೆಂಗಳೂರು: ಮಾಜಿ ಸಚಿವ ಝಮೀರ್ ಅಹ್ಮದ್ ಅವರ ನಿವಾಸಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು, ಇದೀಗ ಡಾ.ಜಿ ಪರಮೇಶ್ವರ್ ಅವರು ಝಮೀರ್ ನಿವಾಸಕ್ಕೆ ಭೇಟಿ ನೀಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪರಮೇಶ್ವರ್, ಝಮೀರ್ ಅಹ್ಮದ್ ಅವರ ಐಟಿ, ಇಡಿ ದಾಳಿ ಯಾವ ಕಾರಣಕ್ಕೆ ಆಗಿದೆ ಎಂದು ಗೊತ್ತಿಲ್ಲ. ಝಮೀರ್ ನಮ್ಮ ಪಕ್ಷದ ಪ್ರಮುಖ ನಾಯಕರಾಗಿದ್ದು, ಅವರನ್ನು ಮಾತನಾಡಿಸುವ ಉದ್ದೇಶದಿಂದ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.