ಅಫ್ಘಾನಿಸ್ತಾನ ಬಿಕ್ಕಟ್ಟು: ಹೊಸ ಮಾದರಿಯ ಎಲೆಕ್ಟ್ರಾನಿಕ್ ವೀಸಾಗಳನ್ನು ಘೋಷಿಸಿದ ಭಾರತ

Update: 2021-08-17 07:31 GMT

ಕಾಬೂಲ್: ಅಫ್ಘಾನಿಸ್ತಾನದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತಕ್ಕೆ ಬರಲು ಬಯಸುವ ಅಫ್ಘಾನಿಯರ ತ್ವರಿತಗತಿಯ ಅರ್ಜಿಗಳಿಗಾಗಿ ಸರಕಾರವು ಹೊಸ ಮಾದರಿಯ  ಎಲೆಕ್ಟ್ರಾನಿಕ್ ವೀಸಾಗಳನ್ನು ಘೋಷಿಸಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ಎರಡು ದಿನಗಳ ನಂತರ ಈ ಘೋಷಣೆ ಬಂದಿದೆ.

ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಂಎಚ್ ಎ  ವೀಸಾ ನಿಬಂಧನೆಗಳನ್ನು ಪರಿಶೀಲಿಸುತ್ತದೆ. ಭಾರತಕ್ಕೆ ಪ್ರವೇಶಿಸಲು ತ್ವರಿತಗತಿಯ ವೀಸಾ ಅರ್ಜಿಗಳಿಗೆ "ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ" ಎಂಬ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ

ಪ್ರಸ್ತುತ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು, ಕಾಬೂಲ್‌ನಲ್ಲಿರುವ ನಮ್ಮ ರಾಯಭಾರಿ ಹಾಗೂ  ಅವರ ಭಾರತೀಯ ಸಿಬ್ಬಂದಿ ತಕ್ಷಣವೇ ಭಾರತಕ್ಕೆ ಕರೆ ತರಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದ  ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News