×
Ad

ಅಂಗನವಾಡಿ ನೌಕರರ ಧರಣಿ ಎರಡನೇ ದಿನವೂ ಮುಂದುವರಿಕೆ

Update: 2021-08-17 16:45 IST

ಉಡುಪಿ, ಆ.17: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿಧಿಷ್ಟಾವಧಿ ಧರಣಿ ಸತ್ಯಾಗ್ರಹವು ಎರಡನೇ ದಿನವಾದ ಮಂಗಳವಾರವೂ ಮುಂದುವರೆದಿದೆ.

ಬೆಳಗ್ಗೆಯಿಂದ ಸಂಜೆಯವರೆಗೆ ಧರಣಿ ನಡೆಸಿದ ನೌಕರರು ಬೇಡಿಕೆ ಈಡೇರಿ ಸುವಂತೆ ಸರಕಾರವನ್ನು ಒತ್ತಾಯಿಸಿದರು. ಧರಣಿಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ, ಖಜಾಂಚಿ ಯಶೋಧ, ಬ್ರಹ್ಮವಾರ ವಲಯ ಮುಖಂಡರಾದ ಜಯಲಕ್ಷ್ಮೀ, ಸರೋಜಿನಿ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ತಾಲೂಕು ಕಾರ್ಯರ್ಶಿ ಕವಿರಾಜ್ ಎಸ್. ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News