ಬೆಂಗಳೂರು: ಪಿಯುಸಿ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್
Update: 2021-08-17 18:10 IST
ಬೆಂಗಳೂರು, ಆ.17: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಪ್ರವೇಶ ಪತ್ರ ತೋರಿಸಿ ಬಿಎಂಟಿಸಿ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ರಿಯಾಯಿತಿ ಪಾಸ್ ವಿತರಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಆ.19ರಿಂದ ಸೆ.3ರವರೆಗೆ ನಡೆಯಲಿರುವ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗಲು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಬಸ್‍ನಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡಲಾಗಿದೆ.
ಪ್ರವೇಶ ಪತ್ರ ಆಧಾರದ ಮೇಲೆ ಬಸ್‍ನಲ್ಲಿ ಪ್ರಯಾಣಿಸಲು ರಿಯಾಯಿತಿ ಪಸ್ ನೀಡುತ್ತಿದೆ ಎಂದು ಪ್ರಕಟನೆ ತಿಳಿಸಿದೆ.