ವಾಸುಕಿವನಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ
Update: 2021-08-17 20:27 IST
ಬಂಟ್ವಾಳ, ಆ.17: ಇಲ್ಲಿಗೆ ಸಮೀಪದ ಕುದನೆ ಶ್ರೀ ಕ್ಷೇತ್ರ ವಾಸುಕಿವನದಲ್ಲಿ ಸೋಮವಾರ ರಾತ್ರಿ ನಡೆದ ನೇಮೋತ್ಸವದಲ್ಲಿ ರಾಜ್ಯ ಇಂಧನ ಸಚಿವರಾದ ವಿ.ಸುನೀಲ್ ಕುಮಾರ್ ದಂಪತಿ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಧರ್ಮದೈವದ ಗಂಧಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಉದಯ ಕುಮಾರ್ ರಾವ್, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ನಾಮನಿರ್ದೇಶಿತ ಚಂದ್ರ ಶೇಖರ್ ಪೂಜಾರಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ ಪಕ್ಷದ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.