×
Ad

ಹಾಸನದಲ್ಲಿ ನೈಟ್ ಕರ್ಪ್ಯೂ ಜಾರಿ

Update: 2021-08-17 21:43 IST

ಹಾಸನ : ಹಾಸನ ಜಿಲ್ಲಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಈ ಕರ್ಫ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಯಾವುದೇ ಪ್ರತಿಭಟನೆ ಅಥವಾ ಮುಷ್ಕರದಲ್ಲಿ ಗರಿಷ್ಠ ಇಪ್ಪತ್ತಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದ್ದು, ನಿಷೇದಾಜ್ಞೆ ಅವಧಿಯಲ್ಲಿ ಸರಕು ಸಾಗಾಟದ ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನ ಸಂಚಾರ ಹಾಗೂ ವ್ಯಕ್ತಿಗಳ ಓಡಾಟ ಕಂಡು ಬಂದಲ್ಲಿ, ಕಾನೂನು ಕ್ರಮ ಹಾಗೂ ಅನ್ವಯವಾಗಬಹುದಾದ ಇತರೆ  ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

 ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಎದ್ದುಕಾಣುವಂತೆ ಪ್ರದರ್ಶಿಸಲು ಮತ್ತು ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಲು ಹಾಗೂ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News