ಎಪಿಎಂಸಿಯ ಅಸಂಘಟಿತ ಕಾರ್ಮಿಕರಿಗೆ ಕಿಟ್ ವಿತರಣೆ
Update: 2021-08-17 21:59 IST
ಮಂಗಳೂರು, ಆ.17: ಸ್ವಾತಂತ್ರ್ಯೋತ್ಸವದ ಆಚರಣೆಯ ಪ್ರಯುಕ್ತ ಹಣ್ಣು ಮತ್ತು ತರಕಾರಿ ವ್ಯಾಪಾರಸ್ಥರ ಸಂಘದ ವತಿಯಿಂದ ಎಪಿಎಂಸಿ ಬೈಕಂಪಾಡಿ ಯಾರ್ಡ್‌ನಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಹಮಾಲರುಗಳಿಗೆ ಆಹಾರ ಸಾಮಾಗ್ರಿಗಳ ಪೊಟ್ಟಣವನ್ನು ಉಚಿತವಾಗಿ ವಿತರಿಸಲಾಯಿತು.
ಕಿಟ್ ವಿತರಿಸಿ ಮಾತನಾಡಿದ ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ನೋಂದಾಯಿಸಲ್ಪಟ್ಟ ಕಾರ್ಮಿಕರಿಗೆ ಜೀವವಿಮೆ, ವಸತಿ ರಹಿತರಿಗೆ ನಿವೇಶನ ಯೋಜನೆ ಮತ್ತವರ ಕುಟುಂಬದ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆಯು ಸರಕಾರದಿಂದ ಲಭ್ಯವಿದೆ. ಅದನ್ನು ಪಡದುಕೊಂಡು ಜೀವನವನ್ನು ಭದ್ರತೆ ಮಾಡುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ವರುಣ್ ಚೌಟ, ವ್ಯಾಪಾರಿ ಸಂಘದ ಅಧ್ಯಕ್ಷ ಭರತ್‌ರಾಜ್, ಎಪಿಎಂಸಿ ಸದಸ್ಯರಾದ ರಾಘವ ಶೆಟ್ಟಿ, ಪ್ರವೀಣ್ ಕುಮಾರ್ ಅದ್ಯಪಾಡಿ, ಕಾರ್ಯದರ್ಶಿ ಸಿ.ಎಚ್.ಮೋಹನ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಕಾರ್ಯಕ್ರಮ ನಿರೂಪಿಸಿದರು.