×
Ad

ಬೊಟ್ಟಿಕೆರೆ ಪುರುಷೋತ್ತಮ ಪೂಂಜಾರಿಗೆ ನುಡಿನಮನ

Update: 2021-08-17 22:00 IST

ಮಂಗಳೂರು, ಆ.17: ಯಕ್ಷಗಾನ ಭಾಗವತ, ಪ್ರಸಂಗಕರ್ತ, ಬೊಟ್ಟಿಕೆರೆ ಪುರುಷೋತ್ತಮ ಪೂಂಜಾರಿಗೆ ನುಡಿನಮನ ಕಾರ್ಯಕ್ರಮವು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಕಂಕನಾಡಿ ಗರೋಡಿ ಬಳಿಯ ಸಭಾಂಗಣವೊಂದರಲ್ಲಿ ನೆರವೇರಿತು.

ಅರ್ಥಧಾರಿ ಪ್ರಭಾಕರ ಜೋಷಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ನುಡಿನಮನ ಸಲ್ಲಿಸಿದರು.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರವಿಚಂದ್ರ ಶೆಟ್ಟಿ ಅಶೋಕ ನಗರ, ಜಗದೀಶ್ ಶೆಟ್ಟಿ ಕಾರ್‌ ಸ್ಟ್ರೀಟ್, ಪ್ರದೀಪ್ ಆಳ್ವ ಕದ್ರಿ, ಕೃಷ್ಣ ಶೆಟ್ಟಿ ತಾರೇಮಾರ್, ಸುಬ್ರಹ್ಮಣ್ಯ ಭಟ್, ಗೋಪಿನಾಥ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News