×
Ad

​ಆ.19: ಪಂಚಾಯತ್ ರಾಜ್ ಸಂಘಟನೆಯ ಪ್ರತಿನಿಧಿಗಳ ಸಭೆ

Update: 2021-08-17 22:02 IST

ಮಂಗಳೂರು, ಆ.17: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪ್ರತಿನಿಧಿಗಳ ಸಭೆಯು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನ ದಲ್ಲಿ ಆ.19ರಂದು ಅಪರಾಹ್ನ 3 ಗಂಟೆಗೆ ನಡೆಯಲಿದೆ.

ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ಸಿ.ನಾರಾಯಣ ಸ್ವಾಮಿ, ರಾಷ್ಟ್ರೀಯ ಸಲಹೆಗಾರ ವಿ.ವೈ. ಘೋರ್ಪಡೆ. ನಿಕಟಪೂರ್ವ ರಾಜ್ಯಾಧ್ಯಕ್ಷ, ಎಐಸಿಸಿ ಕಾರ್ಯದರ್ಶಿ ಸಂದೀಪ್, ರಾಜ್ಯ ಸಂಯೋಜಕ ಡಿ.ಆರ್.ಪಾಟೀಲ್, ರಾಜ್ಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News