ಬೆಂಗಳೂರು: ಅಫ್ಘಾನಿಸ್ತಾನ ವಿದ್ಯಾರ್ಥಿಗಳಿಗೆ ಕಮಲ್ ಪಂತ್ ಅಭಯ

Update: 2021-08-18 12:09 GMT

ಬೆಂಗಳೂರು, ಆ.18: ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿರುವ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಬುಧವಾರ ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಕಚೇರಿ ಆವರಣದಲ್ಲಿ ನಗರ ಪೊಲೀಸರು ವಶಪಡಿಸಿಕೊಂಡ ಮಾಲುಗಳ ಪ್ರದರ್ಶನ ಹಾಗೂ ವಾರಸುದಾರರಿಗೆ ಮರಳಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ತೊಂದರೆ ಇದ್ದರೆ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡದರೆ ಅಗತ್ಯ ನೆರವು ನೀಡಲಾಗುವುದು. ಅಲ್ಲದೇ ದಾಖಲೆಯಲ್ಲಿ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸುತ್ತೇವೆ ಎಂದು ತಿಳಿಸಿದರು.

ನಗರದಲ್ಲಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಈ ಬಗ್ಗೆ ಏನಾದರೂ ಗೊಂದಲಗಳಿದ್ದರೆ, ಹತ್ತಿರದ ಪೊಲೀಸ್ ಠಾಣೆಗೂ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News