ಗುರುವಾರದಿಂದ ದ್ವಿತೀಯ ಪಿಯು ಪರೀಕ್ಷೆ: ವೇಳಾಪಟ್ಟಿ ಪ್ರಕಟ

Update: 2021-08-18 13:51 GMT

ಬೆಂಗಳೂರು, ಆ.18: ಕಳೆದ ತಿಂಗಳು ಪರೀಕ್ಷೆ ಇಲ್ಲದೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶವನ್ನು ಒಪ್ಪದವರು, ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ನಾಳೆ(ಆ.19ರಿಂದ)ಯಿಂದ ಸೆ.3ರವರೆಗೆ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್, ಇಂದು ಐಚ್ಛಿಕ ಕನ್ನಡ, ಗಣಿತ ಹಾಗೂ ಮೂಲಗಣಿತ ಪರೀಕ್ಷೆ ನಡೆಯಲಿದೆ. ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 5,093 ಪ್ರೆಶರ್ಸ್ ವಿದ್ಯಾರ್ಥಿಗಳು ಇದ್ದಾರೆಂದು ತಿಳಿಸಿದ್ದಾರೆ.

ರಾಜ್ಯದ 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.  ಒಂದು ಪರೀಕ್ಷಾ ಕೊಠಡಿಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ಡೆಸ್ಕ್‍ನಲ್ಲಿ ಒಬ್ಬರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಕೊರೋನ ಸೋಂಕಿನ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಪಿಯು ಮಂಡಳಿ ಎಲ್ಲಾ  ವ್ಯವಸ್ಥೆಯನ್ನು ಮಾಡಿದೆ. ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಇದುವರೆಗೆ ಪರೀಕ್ಷೆ ಬರೆಯುವ ಯಾವ ವಿದ್ಯಾರ್ಥಿಯೂ ಕೊರೋನ ಸೋಂಕಿನ ಕುರಿತು ಮಾಹಿತಿ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಹುತೇಕ ಎಲ್ಲ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30ರವರೆಗೆ ಇರುತ್ತದೆ. ಉಳಿದಂತೆ ಕೆಲವೊಂದು ಐಚ್ಛಿಕ ವಿಷಯಗಳು ಮಧ್ಯಾಹ್ನ 2.15ರಿಂದ 5.30ರವರೆಗೆ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪರೀಕ್ಷಾ ವೇಳಾಪಟ್ಟಿ

ಆ.19: ಐಚ್ಛಿಕ ಕನ್ನಡ, ಗಣಿತ, ಮೂಲಗಣಿತ
ಆ.21: ಕನ್ನಡ(ಮಧ್ಯಾಹ್ನ ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್)
ಆ.23: ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಆ.24: ಇಂಗ್ಲಿಷ್
ಆ.25: ಲೆಕ್ಕಶಾಸ್ತ್ರ, ಜಿಯೋಲಜಿ, ಶಿಕ್ಷಣ, ಗೃಹ ವಿಜ್ಞಾನ
ಆ.26: ರಾಜಕೀಯ ವಿಜ್ಞಾನ
ಆ.27: ಇತಿಹಾಸ, ಸಂಖ್ಯಾಶಾಸ್ತ್ರ
ಆ.30: ಅರ್ಥಶಾಸ್ತ್ರ
ಆ.31: ಉರ್ದು, ಸಂಸ್ಕøತ
ಸೆ.1: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸಮಾಜಶಾಸ್ತ್ರ, ಗಣಕ ವಿಜ್ಞಾನ, ಎಲೆಕ್ಟ್ರಾನಿಕ್ಸ್, ಜೀವಶಾಸ್ತ್ರ
ಸೆ.2: ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ
ಸೆ.3: ಹಿಂದಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News